Versions
KNV ಹೀಗಿರುವದರಿಂದ ಯೇಸು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ತಿರುಗಾಡಲಿಲ್ಲ. ಆದರೆ ಅಲ್ಲಿಂದ ಅಡವಿಗೆ ಸವಿಾಪ ದಲ್ಲಿದ್ದ ಪ್ರದೇಶದ ಎಫ್ರಾಯಿಮ್ ಎಂಬ ಪಟ್ಟಣಕ್ಕೆ ಹೋಗಿ ಅಲ್ಲಿ ತನ್ನ ಶಿಷ್ಯರ ಸಂಗಡ ಇದ್ದನು.
ERVKN ಆದ್ದರಿಂದ ಯೇಸುವು ಯೆಹೂದ್ಯರ ಮಧ್ಯದಲ್ಲಿ ಬಹಿರಂಗವಾಗಿ ಸಂಚರಿಸುವುದನ್ನು ಬಿಟ್ಟುಬಿಟ್ಟನು. ಆತನು ಜೆರುಸಲೇಮನ್ನು ಬಿಟ್ಟು ಮರುಭೂಮಿಯ ಸಮೀಪದಲ್ಲಿದ್ದ ಸ್ಥಳಕ್ಕೆ ಹೋಗಿ ಎಫ್ರಾಯಿಮ್ ಎಂಬ ಊರಿನಲ್ಲಿ ತನ್ನ ಶಿಷ್ಯರ ಸಂಗಡ ಇಳಿದುಕೊಂಡನು.
IRVKN ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು. PEPS