Versions
KNV ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
ERVKN ಯೆಹೂದ್ಯರ ಪಸ್ಕಹಬ್ಬವು ಬಹು ಸಮೀಪವಾಗಿತ್ತು. ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುವ ಸಮಯ ಬಂದಿರುವುದಾಗಿ ಯೇಸುವಿಗೆ ತಿಳಿದಿತ್ತು. ಈ ಲೋಕದಲ್ಲಿದ್ದ ತನ್ನವರನ್ನು ಆತನು ಯಾವಾಗಲೂ ಪ್ರೀತಿಸುತ್ತಿದ್ದನು. ಈಗಲಾದರೊ ಅವರ ಮೇಲೆ ತನಗಿರುವ ಅಪಾರ ಪ್ರೀತಿಯನ್ನು ತೋರಿಸುವ ಕಾಲ ಆತನಿಗೆ ಬಂದಿತ್ತು.
IRVKN {ಯೇಸು ತನ್ನ ಶಿಷ್ಯರ ಕಾಲುಗಳನ್ನು ತೊಳೆದದ್ದು} PS ಪಸ್ಕಹಬ್ಬದ ಹಿಂದಿನ ದಿನ ಯೇಸು, ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆ ಬಂದಿತೆಂದು ತಿಳಿದುಕೊಂಡು, ಈ ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ, ಅವರನ್ನು ಕೊನೆಯವರೆಗೂ ಪ್ರೀತಿಸುತ್ತಾ ಬಂದನು.