Versions
KNV ಬಂಡೆಯ ನೆಲದವರು ಯಾರಂದರೆ, ಅವರು ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಅಂಗೀಕರಿಸುವರು; ಇವರು ಬೇರಿಲ್ಲದಿರುವದರಿಂದ ಸ್ವಲ್ಪಕಾಲ ನಂಬಿ ಶೋಧನೆ ಬಂದಾಗ ಬಿದ್ದು ಹೋಗುವರು.
ERVKN ಬಂಡೆಯ ಮೇಲೆ ಬಿದ್ದ ಬೀಜವೆಂದರೇನು? ಕೆಲವರು ದೇವರ ವಾಕ್ಯ ಕೇಳಿ ಸಂತೋಷದಿಂದ ಸ್ವೀಕರಿಸಿಕೊಳ್ಳುತ್ತಾರೆ. ಆದರೆ ಅವರಿಗೆ ಆಳವಾದ ಬೇರುಗಳಿರುವುದಿಲ್ಲ. ಅವರು ಸ್ವಲ್ಪಕಾಲ ಮಾತ್ರವೇ ನಂಬುತ್ತಾರೆ. ಬಳಿಕ ತೊಂದರೆಯೇನಾದರೂ ಬಂದರೆ ತಮ್ಮ ನಂಬಿಕೆಯನ್ನು ಕಳೆದುಕೊಂಡು ದೇವರಿಂದ ದೂರ ಸರಿಯುತ್ತಾರೆ.
IRVKN ಕೆಲವರು ವಾಕ್ಯವನ್ನು ಕೇಳಿದಾಗಲೇ ಅದನ್ನು ಸಂತೋಷದಿಂದ ಅಂಗೀಕರಿಸುತ್ತಾರೆ; ಇವರಿಗೆ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರವೇ ನಂಬಿಕೊಂಡಿದ್ದು ಶೋಧನೆಯ ಕಾಲದಲ್ಲಿ ಬಿದ್ದು ಹೋಗುತ್ತಾರೆ. ಇವರೇ ಬಂಡೆಯ ಮೇಲೆ ಬೀಳಲ್ಪಟ್ಟ ಬೀಜಗಳು.