Bible Versions
Bible Books

Numbers 22:6 (LXXRP) Septugine Greek Old Testament with Grammar and Strong Code

Versions

KNV   ಈಗ ನೀನು ದಯಮಾಡಿ ಬಂದು ಜನವನ್ನು ನನಗಾಗಿ ಶಪಿಸು; ಅವರು ನನಗಿಂತ ಬಲಿಷ್ಠರಾಗಿದ್ದಾರೆ. ಒಂದು ವೇಳೆ ನಾನು ಗೆದ್ದೇನು, ನಾವು ಅವರನ್ನು ಹೊಡೆದೇವು; ನಾನು ಅವರನ್ನು ದೇಶದೊಳಗಿಂದ ಹೊರಡಿಸೇನು; ನೀನು ಯಾವನನ್ನು ಆಶೀರ್ವದಿಸು ತ್ತೀಯೋ ಅವನು ಆಶೀರ್ವದಿಸಲ್ಪಟ್ಟವನೇ; ನೀನು ಯಾವನನ್ನು ಶಪಿಸುತ್ತೀಯೋ ಅವನು ಶಪಿಸಲ್ಪಟ್ಟವನೇ ಎಂದು ನಾನು ಬಲ್ಲೆನು.
ERVKN   ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಜನಕ್ಕೆ ಶಾಪಕೊಡಬೇಕು, ಯಾಕೆಂದರೆ ಅವರು ನನಗಿಂತ ಬಲಿಷ್ಠರಾಗಿದ್ದಾರೆ. ನೀನು ಶಪಿಸಿದರೆ ಆಗ ನಾನು ಅವರನ್ನು ಸೋಲಿಸಿ ದೇಶದಿಂದ ಓಡಿಸಲು ನನಗೆ ಸಾಧ್ಯವಾಗುವುದು. ನೀನು ಯಾವನನ್ನು ಆಶೀರ್ವದಿಸುವಿಯೋ ಅವನು ಯಶಸ್ವಿಯಾಗುವನೆಂದೂ ನೀನು ಯಾವನನ್ನು ಶಪಿಸುವೆಯೋ ಅವನಿಗೆ ಸೋಲಾಗುವುದೆಂದೂ ನನಗೆ ಗೊತ್ತಿದೆ” ಎಂದು ಹೇಳಿದನು.
IRVKN   ಆದುದರಿಂದ ನೀನು ದಯಮಾಡಿ ಬಂದು ನನಗೋಸ್ಕರ ಜನರಿಗೆ ಶಾಪಕೊಡಬೇಕು. ಆಗ ಅವರನ್ನು ಸೋಲಿಸಿ ದೇಶದಿಂದ ಹೊರಡಿಸಿಬಿಡುವುದಕ್ಕೆ ನನ್ನಿಂದ ಆಗುವುದು. ನಿನ್ನ ಆಶೀರ್ವಾದದಿಂದ ಶುಭವೂ, ನಿನ್ನ ಶಾಪದಿಂದ ಅಶುಭವೂ ಉಂಟಾಗುತ್ತದೆ ಎಂಬುದನ್ನು ನಾನು ಬಲ್ಲೆನು” ಎಂದು ಕಳುಹಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us