Versions
KNV ಆ ಮನು ಷ್ಯನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ತಂದು ಅವಳಿಗೋಸ್ಕರ ಕಾಣಿಕೆಯಾಗಿ ಏಫದ ಹತ್ತನೇ ಪಾಲನ್ನು ಜವೆಗೋಧಿಯ ಹಿಟ್ಟನ್ನು ತರಬೇಕು. ಅದರ ಮೇಲೆ ಎಣ್ಣೆಯನ್ನಾದರೂ ಸಾಂಬ್ರಾಣಿಯನ್ನಾದರೂ ಹಾಕ ಬಾರದು; ಅದು ರೋಷದ ಕಾಣಿಕೆಯೂ ಅಪರಾಧ ವನ್ನು ಜ್ಞಾಪಕಕ್ಕೆ ತರುವ ಕಾಣಿಕೆಯೂ ಆಗಿದೆ.
ERVKN ಅವನು ಅವಳನ್ನು ಯಾಜಕನ ಬಳಿಗೆ ಕರೆದುಕೊಂಡು ಹೋಗಬೇಕು. ಅಲ್ಲದೆ ಅವನು ಮೂರು ಸೇರು ಗೋಧಿಹಿಟ್ಟನ್ನು ಕಾಣಿಕೆಯಾಗಿ ಯಾಜಕನಿಗೆ ತಂದು ಕೊಡಬೇಕು. ಅವನು ಅದರ ಮೇಲೆ ಎಣ್ಣೆ ಹಾಕಬಾರದು; ಅವನು ಅದರ ಮೇಲೆ ಧೂಪಹಾಕಬಾರದು; ಯಾಕೆಂದರೆ ಇದು ಈರ್ಷೆಯುಳ್ಳ ಗಂಡನ ಧಾನ್ಯಸಮರ್ಪಣೆಯಾಗಿದೆ. ಆಕೆಯ ದೋಷವನ್ನು ಹೊರಪಡಿಸಲು ಕೊಟ್ಟಂಥ ಧಾನ್ಯಸಮರ್ಪಣೆ ಇದಾಗಿದೆ.
IRVKN ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು. PEPS