Versions
KNV ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
ERVKN ನಾವಾದರೋ ನಿಜವಾದ ಸುನ್ನತಿಯನ್ನು ಹೊಂದಿದವರಾಗಿದ್ದೇವೆ; ದೇವರನ್ನು ಆತ್ಮನ ಮೂಲಕ ಆರಾಧಿಸುವವರಾಗಿದ್ದೇವೆ. ನಾವು ಕ್ರಿಸ್ತ ಯೇಸುವಿನಲ್ಲಿರಲು ಹೆಮ್ಮೆಪಡುತ್ತೇವೆ. ನಾವು ನಮ್ಮ ಮೇಲಾಗಲಿ ನಾವು ಮಾಡಬಲ್ಲವುಗಳ ಮೇಲಾಗಲಿ ಭರವಸೆ ಇಡುವುದಿಲ್ಲ.
IRVKN ನಿಜವಾದ ಸುನ್ನತಿಯವರು ಯಾರೆಂದರೆ, * ಯೋಹಾ 4:23, ಯೂದ. 20, ಗಲಾ. 5:25 ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, † ರೋಮಾ. 15:17, ಗಲಾ. 6:14 ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ‡ ರೋಮಾ. 2:29 ನಾವುಗಳೇ.