Versions
KNV ಮೋಶೆಯು ಆರೋನನಿಗೂ ಅವನ ಕುಮಾರರಿಗೂ--ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ; ಅದನ್ನು ಪ್ರತಿಷ್ಠಿತ ಬುಟ್ಟಿ ಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು; ನಾನು ಆಜ್ಞಾಪಿಸಿ ಹೇಳಿದಂತೆ ಆರೋನನೂ ಅವನ ಕುಮಾ ರರೂ ಅದನ್ನು ತಿನ್ನಬೇಕು.
ERVKN ತರುವಾಯ ಮೋಶೆಯು ಆರೋನನಿಗೂ ಅವನ ಪುತ್ರರಿಗೂ ಹೀಗೆ ಹೇಳಿದನು: “ನೀವು ಮಾಂಸವನ್ನು ದೇವದರ್ಶನಗುಡಾರದ ಬಾಗಿಲಲ್ಲಿ ಬೇಯಿಸಿ ತಿನ್ನಬೇಕು. ಪ್ರತಿಷ್ಠೆಕಾಣಿಕೆಯ ಬುಟ್ಟಿಯಲ್ಲಿರುವ ರೊಟ್ಟಿಯೊಡನೆ ಅದನ್ನು ಅಲ್ಲಿ ತಿನ್ನಿರಿ. ಮಾಂಸವನ್ನೂ ರೊಟ್ಟಿಯನ್ನೂ ಆ ಸ್ಥಳದಲ್ಲಿ ತಿನ್ನಿರಿ. ನಾನು ಹೇಳುವ ಹಾಗೆ ಇದನ್ನು ಮಾಡಿರಿ.