Versions
KNV ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.
ERVKN ನಾವು ನಮ್ಮ ಪೂರ್ವಿಕರಂತೆ ಈ ಲೋಕದಲ್ಲಿ ಪ್ರವಾಸಿಗಳಾಗಿದ್ದೇವೆ; ದಾಟಿಹೋಗುವ ನೆರಳಿನಂತೆ ನಾವು ಈ ಲೋಕದಲ್ಲಿರುತ್ತೇವೆ. ಅದನ್ನು ನಿಲ್ಲಿಸಲು ನಮಗೆ ಸಾಧ್ಯವಿಲ್ಲ.
IRVKN ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.