Versions
KNV ಆಗ ಬದುಕಿರುವ ಕೂಸಿನ ತಾಯಿಯಾದವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ--ಓ ನನ್ನ ಒಡೆ ಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು; ಕೊಲ್ಲಲ್ಲೇ ಬೇಡ ಅಂದಳು. ಆದರೆ ಮತ್ತೊಬ್ಬಳು--ಅದು ನನ್ನದಾಗಲಿ ನಿನ್ನದಾಗಲಿ ಆಗಿರಬಾರದು; ಕಡಿ ಯಿರಿ ಅಂದಳು.
ERVKN ಆಗ ಎರಡನೆಯ ಸ್ತ್ರೀಯು, “ಈಗ ಸರಿಹೋಯಿತು. ಮಗುವನ್ನು ಎರಡು ಹೋಳು ಮಾಡಿ. ಆಗ ನಮ್ಮಿಬ್ಬರಿಗೂ ಅವನಿರುವುದಿಲ್ಲ” ಎಂದಳು. ಆದರೆ ಮೊದಲನೆಯ ಸ್ತ್ರೀಯು, ಅಂದರೆ, ತನ್ನ ಮಗುವಿನ ಮೇಲೆ ತುಂಬಾ ಪ್ರೀತಿಯನ್ನಿಟ್ಟಿದ ನಿಜವಾದ ತಾಯಿಯು ರಾಜನಿಗೆ, “ದಯವಿಟ್ಟು ಆ ಮಗುವನ್ನು ಕೊಲ್ಲಬೇಡಿ ಸ್ವಾಮಿ! ಅವಳಿಗೇ ಕೊಟ್ಟುಬಿಡಿ” ಎಂದು ಹೇಳಿದಳು.
IRVKN ಆಗ ಜೀವದಿಂದಿದ್ದ ಕೂಸಿನ ನಿಜವಾದ ತಾಯಿ ಕೂಸಿನ ವಿಷಯದಲ್ಲಿ ಕರಳು ಮರುಗಿ ಅರಸನಿಗೆ, “ನನ್ನ ಒಡೆಯಾ ಬೇಡ, ಬದುಕಿರುವ ಕೂಸನ್ನು ಅವಳಿಗೆ ಕೊಟ್ಟುಬಿಡು. ಅದನ್ನು ಕೊಲ್ಲಿಸಬೇಡ” ಎಂದು ಬೇಡಿಕೊಳ್ಳುವಲ್ಲಿ ಎರಡನೆಯವಳು, “ಅದು ನನಗೂ ಬೇಡ, ನಿನಗೂ ಬೇಡ ಕತ್ತರಿಸಲಿ” ಎಂದು ಕೂಗಿದಳು.