Versions
KNV ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.
ERVKN “ಹೋಗಿ ನನ್ನ ವಿಷಯವಾಗಿಯೂ ಇಸ್ರೇಲ್ ಮತ್ತು ಯೆಹೂದದಲ್ಲಿರುವ ಜನರಿಗೋಸ್ಕರವಾಗಿಯೂ ಯೆಹೋವನಲ್ಲಿ ವಿಚಾರಿಸಿರಿ. ಯೆಹೋವನು ನಮ್ಮ ಮೇಲೆ ಕೋಪಗೊಂಡಿದ್ದಾನೆ. ಯಾಕಂದರೆ ನಮ್ಮ ಪೂರ್ವಿಕರು ಆತನ ಧರ್ಮಶಾಸ್ತ್ರದ ಪ್ರಕಾರ ನಡೆದುಕೊಂಡಿಲ್ಲ. ಈ ಪುಸ್ತಕದಲ್ಲಿ ಮಾಡಬೇಕೆಂದು ಹೇಳಿದ್ದನ್ನು ಅವರು ಮಾಡದೆ ಹೋಗಿದ್ದಾರೆ” ಎಂದು ಹೇಳಿದನು.
IRVKN “ನಮ್ಮ ಪೂರ್ವಿಕರು ಈ ಗ್ರಂಥದಲ್ಲಿ ಬರೆದಿರುವ ಯೆಹೋವನ ಆಜ್ಞೆಗಳನ್ನೆಲ್ಲಾ ಕೈಕೊಳ್ಳದೆ ಹೋದುದರಿಂದಲೇ ಯೆಹೋವನು ತನ್ನ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾನೆ; ಆದುದರಿಂದ ನೀವು ನನಗೋಸ್ಕರವೂ ಹಾಗೂ ಇಸ್ರಾಯೇಲ್ಯರಲ್ಲಿ, ಯೆಹೂದ್ಯರಲ್ಲಿ ಉಳಿದಿರುವವರಿಗೋಸ್ಕರವೂ ಯೆಹೋವನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಅರ್ಥವನ್ನು ವಿವರವಾಗಿ ತಿಳಿದು ಬರಲು” ಆಜ್ಞಾಪಿಸಿದನು.