Versions
KNV ಆಗ ಅರಸನು ಚಾದೋಕನಿಗೆ--ದೇವರ ಮಂಜೂಷವನ್ನು ಪಟ್ಟಣಕ್ಕೆ ತಿರಿಗಿ ತಕ್ಕೊಂಡು ಹೋಗು. ಕರ್ತನ ದೃಷ್ಟಿಯಲ್ಲಿ ಮುಂದೆ ನನಗೆ ಕೃಪೆ ದೊರಕಿದರೆ ಆತನು ನನ್ನನ್ನು ತಿರಿಗಿ ಬರಮಾಡಿ ಅದನ್ನೂ ಅದರ ವಾಸಸ್ಥಳವನ್ನೂ ನನಗೆ ತೋರಿಸುವನು.
ERVKN ರಾಜನಾದ ದಾವೀದನು ಚಾದೋಕನಿಗೆ, “ದೇವರ ಪವಿತ್ರ ಪೆಟ್ಟಿಗೆಯನ್ನು ಜೆರುಸಲೇಮಿಗೆ ಮತ್ತೆ ತೆಗೆದುಕೊಂಡು ಹೋಗು. ಯೆಹೋವನು ನನಗೆ ದಯಾಪರನಾಗಿದ್ದರೆ, ನನ್ನನ್ನು ಮತ್ತೆ ಬರಮಾಡುತ್ತಾನೆ. ಜೆರುಸಲೇಮನ್ನು ಮತ್ತು ಆತನ ಆಲಯವನ್ನು ಮತ್ತೆ ನಾನು ನೋಡುವ ಹಾಗೆ ಯೆಹೋವನು ಮಾಡುತ್ತಾನೆ.
IRVKN ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಿರುಗಿ ತೆಗೆದುಕೊಂಡು ಹೋಗು. ಯೆಹೋವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ ನಾನು ಆತನನ್ನೂ, ಆತನ ಆಲಯವನ್ನೂ ನೋಡುವ ಹಾಗೆ ಆತನೇ ನನ್ನನ್ನು ಪುನಃ ಬರಮಾಡುವನು.