Versions
KNV ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.
ERVKN ನೀನು ಮೆಫೀಬೋಶೆತನಿಗಾಗಿ ಭೂಮಿಯಲ್ಲಿ ವ್ಯವಸಾಯ ಮಾಡು. ನಿನ್ನ ಮಕ್ಕಳೂ ನಿನ್ನ ಸೇವಕರೂ ಮೆಫೀಬೋಶೆತನಿಗಾಗಿ ಇದನ್ನು ಮಾಡಲಿ. ನೀನು ಬೆಳೆಗಳನ್ನು ಕೊಯ್ದು ಸುಗ್ಗಿಮಾಡು. ಆಗ ನಿನ್ನ ಒಡೆಯನ ಮೊಮ್ಮಗನಿಗೆ ಬೇಕಾದಷ್ಟು ಆಹಾರವಿರುತ್ತದೆ. ಆದರೆ ನಿನ್ನ ಒಡೆಯನ ಮೊಮ್ಮಗನಾದ ಮೆಫೀಬೋಶೆತನು ಯಾವಾಗಲೂ ನನ್ನ ಪಂಕ್ತಿಯಲ್ಲಿ ಊಟ ಮಾಡಬೇಕು” ಎಂದನು. ಚೀಬನಿಗೆ ಹದಿನೈದು ಮಂದಿ ಗಂಡುಮಕ್ಕಳೂ, ಇಪ್ಪತ್ತು ಮಂದಿ ಸೇವಕರೂ ಇದ್ದರೂ.
IRVKN ನೀನು, ನಿನ್ನ ಮಕ್ಕಳೂ ಮತ್ತು ನಿನ್ನ ದಾಸರು ನಿನ್ನ ಯಜಮಾನನ ಮೊಮ್ಮಗನ ಆಹಾರಕ್ಕಾಗಿ ಭೂಮಿಯನ್ನು ವ್ಯವಸಾಯ ಮಾಡಿ, ಅದರ ಬೆಳೆಯನ್ನು ಇವರ ಮನೆಯವರ ಅಶನಾರ್ಥವಾಗಿ (ಜೀವನಾಂಶಕ್ಕಾಗಿ) ತಂದು ಕೊಡಬೇಕು. ಆದರೆ ಮೆಫೀಬೋಶೆತ್ತಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವುದು” ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ, ಇಪ್ಪತ್ತು ಮಂದಿ ಸೇವಕರು ಇದ್ದರು. PEPS