Versions
KNV ನಿನಗಿಂತ ದೊಡ್ಡದಾದ ನಿನಗಿಂತ ಬಲಿಷ್ಠ ವಾದ ಜನಾಂಗಗಳನ್ನು ನಿನ್ನ ಮುಂದೆ ಓಡಿಸಿ ನಿನ್ನನ್ನು ಒಳಗೆ ಬರಮಾಡಿ ಈ ದಿನ ಇರುವಂತೆ ನಿನಗೆ ಅವರ ದೇಶವನ್ನು ಸ್ವಾಸ್ತ್ಯವಾಗಿ ಕೊಟ್ಟನು.
ERVKN ನೀವು ಮುಂದುವರಿಯುತ್ತಿದ್ದಾಗ ನಿಮಗಿಂತಲೂ ಮಹತ್ತಾದ ಮತ್ತು ಬಲಿಷ್ಠವಾಗಿದ್ದ ಜನಾಂಗಗಳನ್ನು ಹೊರಡಿಸಿಬಿಟ್ಟನು. ಅವರ ದೇಶದೊಳಗೆ ಯೆಹೋವನು ನಿಮ್ಮನ್ನು ನಡಿಸಿದನು. ಅಲ್ಲಿ ನೀವು ವಾಸಿಸುವುದಕ್ಕಾಗಿ ಆ ದೇಶಗಳನ್ನು ನಿಮಗೆ ಕೊಟ್ಟನು. ಈಗಲೂ ಆತನು ಹಾಗೆಯೇ ಮಾಡುತ್ತಿದ್ದಾನೆ.
IRVKN ಈಗ ನಮ್ಮ ಅನುಭವಕ್ಕೆ ಬಂದ ಪ್ರಕಾರ ನಿಮಗಿಂತ ಮಹಾಬಲಿಷ್ಠವಾದ ಜನಾಂಗಗಳನ್ನು ಹೊರಡಿಸಲು ಅವರ ದೇಶದಲ್ಲಿ ನಿಮ್ಮನ್ನು ಸೇರಿಸಿ, ಆ ದೇಶವನ್ನು ನಿಮಗೇ ಸ್ವದೇಶವಾಗಿ ಕೊಡಬೇಕೆಂದು ಸಂಕಲ್ಪಿಸಿ, ತಾನೇ ನಿಮ್ಮೊಂದಿಗಿದ್ದು ತನ್ನ ಅಪಾರ ಸಾಮರ್ಥ್ಯದಿಂದ ನಿಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿದನಲ್ಲಾ.