Versions
KNV ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.
ERVKN ಇದನ್ನು ಹೇಳಿದೊಡನೆಯೇ ಹತ್ತಿರದಲ್ಲಿದ್ದ ಸೇವಕರು ಬಂದು ಹಾಮಾನನ ಮುಖಕ್ಕೆ ಮುಸುಕುಹಾಕಿದರು. ಅವರಲ್ಲಿದ್ದ ಹರ್ಬೋನ ಎಂಬ ಕಂಚುಕಿಯು, “ಹಾಮಾನನು ತನ್ನ ಮನೆಯ ಬಳಿಯಲ್ಲಿ ಎಪ್ಪತ್ತೈದು ಅಡಿ ಎತ್ತರದ ಗಲ್ಲುಮರವನ್ನು ಮೊರ್ದೆಕೈಗೋಸ್ಕರ ಮಾಡಿಸಿದ್ದಾನೆ. ನಿನ್ನನ್ನು ಕೊಲ್ಲಲು ನಡೆಸಿದ್ದ ಸಂಚನ್ನು ನಿನಗೆ ತಿಳಿಸಿ ನಿನ್ನನ್ನು ಕಾಪಾಡಿದವನೇ ಮೊರ್ದೆಕೈ” ಎಂದು ಹೇಳಿದನು. ಅದಕ್ಕೆ ರಾಜನು, “ಹಾಮಾನನನ್ನು ಅದೇ ಗಲ್ಲುಮರಕ್ಕೆ ತೂಗುಹಾಕಿರಿ” ಎಂದನು.
IRVKN {ಹಾಮಾನನಿಗಾದ ಗಲ್ಲು ಶಿಕ್ಷೆ} PS ಆಗ ಅರಸನ ಸೇವೆಮಾಡುತ್ತಿದ್ದ ಕಂಚುಕಿಗಳಲ್ಲಿ ಒಬ್ಬನಾದ ಹರ್ಬೋನನು, “ಅರಸನ ಪ್ರಾಣರಕ್ಷಣೆಗಾಗಿ ಸಮಾಚಾರವನ್ನು ತಿಳಿಸಿದ ಮೊರ್ದೆಕೈಯನ್ನು ನೇತುಹಾಕಿಸುವುದಕ್ಕೆ ಇವನು ಐವತ್ತು ಮೊಳ ಎತ್ತರವಾದ ಗಲ್ಲು ಕಂಬವನ್ನು ಸಿದ್ಧಮಾಡಿಸಿದ್ದಾನೆ” ಎಂದನು. ಅದಕ್ಕೆ ಅರಸನು, “ಹಾಗಾದರೆ ಹಾಮಾನನ್ನು ಅದಕ್ಕೇ ನೇತುಹಾಕಿರಿ” ಎಂದು ಆಜ್ಞಾಪಿಸಿದನು.