Bible Versions
Bible Books

Ezra 9:11 (MHB) OPEN SCRIPTURES MORPHOLOGICAL HEBREW BIBLE

Versions

KNV   ನೀನು ಹೇಳಿದ್ದುನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು ದೇಶಗಳ ಜನರ ಹೊಲಸಿನಿಂದ ಮೈಲಿಗೆಯಾದ ದೇಶವಾಗಿದೆ. ಅವರು ತಮ್ಮ ಅಸಹ್ಯಗಳಿಂದಲೂ ಹೊಲೆಯಿಂದಲೂ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯ ವರೆಗೂ ತುಂಬಿಸಿದ್ದಾರೆ.
ERVKN   ದೇವರೇ, ನೀನು ನಿನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಆಜ್ಞೆಗಳನ್ನು ಕೊಟ್ಟಿರುವೆ. ನೀನು ಹೀಗೆ ಹೇಳಿದೆ: ‘ನೀವು ವಾಸಿಸಲಿರುವ ಮತ್ತು ನಿಮ್ಮದನ್ನಾಗಿಸಿಕೊಳ್ಳುವ ನಾಡು ಪಾಳಾಗಿರುವ ನಾಡಾಗಿದೆ. ಅಲ್ಲಿಯ ಜನರು ಎಲ್ಲೆಲ್ಲಿಯೂ ಮಾಡಿರುವ ಕೆಟ್ಟಕೃತ್ಯಗಳಿಂದ ಅದು ಹಾಳಾಗಿದೆ; ಅವರು ತಮ್ಮ ಪಾಪಗಳಿಂದ ನಾಡನ್ನು ಹೊಲಸು ಮಾಡಿದ್ದಾರೆ.
IRVKN   ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ, ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ದೇಶವು ಎಲ್ಲೆಲ್ಲೂ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us