Versions
KNV ಆಗ ಹಗ್ಗಾಯನು--ಆದರೆ ಹೆಣದಿಂದ ಅಶುದ್ಧನಾದವನು, ಇವುಗಳಲ್ಲಿ ಯಾವದನ್ನಾದರೂ ಮುಟ್ಟಿದರೆ, ಅಶುದ್ಧವಾಗುವದೋ ಅಂದನು. ಯಾಜ ಕರು ಉತ್ತರ ಕೊಟ್ಟು--ಅಶುದ್ದವಾಗುವದು ಅಂದರು.
ERVKN ಆಗ ಹಗ್ಗಾಯನು, “ಒಬ್ಬ ಮನುಷ್ಯನು ಸತ್ತ ಹೆಣವನ್ನು ಮುಟ್ಟಿದರೆ, ಅವನು ಅಪವಿತ್ರನಾಗುವನು. ಆ ಸ್ಥಿತಿಯಲ್ಲಿ ಅವನು ಮುಟ್ಟಿದ ಯಾವ ವಸ್ತುವೇ ಆಗಲಿ ಅಪವಿತ್ರವಾಗುವದೇ?” ಆಗ ಯಾಜಕರು, “ಹೌದು, ಆ ವಸ್ತುಗಳೂ ಅಪವಿತ್ರವಾಗುವವು” ಎಂದು ಉದ್ಗರಿಸಿದರು.
IRVKN ಆ ಮೇಲೆ ಹಗ್ಗಾಯನು, “ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವುದನ್ನಾದರು ಸೋಕಿದರೆ ಅದು ಅಶುದ್ಧವಾಗುವುದೋ?” ಎಂದು ಕೇಳಿದ್ದಕ್ಕೆ ಯಾಜಕರು, “ಅಶುದ್ಧವೇ ಆಗುವುದು” ಎಂದು ಉತ್ತರಕೊಟ್ಟರು.