Versions
KNV ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು.
ERVKN ದೇವರು ಹೇಳುವದೇನೆಂದರೆ: “ಈ ಲೋಕಕ್ಕೆ ನಾನು ಕೆಡುಕನ್ನು ಉಂಟುಮಾಡುವೆನು. ದುಷ್ಟಜನರನ್ನು ಅವರ ಪಾಪಗಳಿಗಾಗಿ ನಾನು ಶಿಕ್ಷಿಸುವೆನು. ಅಹಂಕಾರಿಗಳು ಗರ್ವವನ್ನು ಕಳೆದುಕೊಳ್ಳುವಂತೆ ಮಾಡುವೆನು; ಕೀಳುಜನರ ಹೊಗಳಿಕೆಗಳನ್ನು ನಿಲ್ಲಿಸುವೆನು.
IRVKN ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ, ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲಗಳಿಗಾಗಿ ಶಿಕ್ಷಿಸಿ,
ಸೊಕ್ಕಿದವರ ಅಹಂಕಾರವನ್ನು ಅಡಗಿಸಿ, ಭಯಂಕರವಾದ ಅವರ ಹೆಮ್ಮೆಯನ್ನು ತಗ್ಗಿಸುವೆನು.