Versions
KNV ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ; ಅವನಿಗೆ ಬಹಳ ಗರ್ವವುಂಟು, ಅಹಂಕಾರವು, ಗರ್ವ ವು ಕೋಪವು ಸಹ ಉಂಟು; ಆದರೆ ಅವನು ಕೊಚ್ಚಿ ಕೊಳ್ಳುವದು ವ್ಯರ್ಥ.
ERVKN ಮೋವಾಬಿನ ಜನರು ತುಂಬಾ ಹೆಚ್ಚಳಪಡುವವರೂ ಜಂಭದವರೂ ಎಂದೂ ನಾವು ಕೇಳಿದ್ದೇವೆ. ಇವರು ಹಿಂಸಕರಾಗಿದ್ದಾರೆ; ಬಡಾಯಿ ಕೊಚ್ಚುವವರಾಗಿದ್ದಾರೆ, ಅವರ ಬಡಾಯಿ ಕೇವಲ ಮಾತುಗಳಷ್ಟೇ.
IRVKN ಮೋವಾಬ್ಯರ ಅಹಂಕಾರವನ್ನು, ಗರ್ವವನ್ನು, ಕೊಚ್ಚಿಕೊಳ್ಳುವಿಕೆಯನ್ನು, ಕೋಪವನ್ನು ನಾವು ಕೇಳಿದ್ದೇವೆ.
ಅವರು ಕೊಚ್ಚಿಕೊಳ್ಳುವುದೆಲ್ಲಾ ಬರೀ ವ್ಯರ್ಥವೇ.