Versions
KNV ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
ERVKN ನಮ್ಮ ಆತ್ಮವು ನಿನ್ನೊಂದಿಗೆ ರಾತ್ರಿಯಲ್ಲಿರಲು ಆಶಿಸುತ್ತದೆ. ನಮ್ಮೊಳಗಿರುವ ಆತ್ಮವು ನಿನ್ನ ಸಹವಾಸವನ್ನು ಬಯಸುತ್ತದೆ. ಹೊಸದಿವಸಗಳ ಮುಂಜಾನೆಯಲ್ಲಿ ನಿನ್ನೊಂದಿಗಿರಲು ಆಶಿಸುತ್ತದೆ. ನಿನ್ನ ನ್ಯಾಯವು ಈ ಭೂಮಿಗೆ ಬಂದಾಗ ಜನರು ಜೀವನದ ಸತ್ಯಮಾರ್ಗವನ್ನು ಅರಿಯುವರು.
IRVKN ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಹಾರೈಸಿದ್ದೇವೆ, ಹೌದು, ನಮ್ಮ ಆತ್ಮದಲ್ಲಿ ನಿನ್ನನ್ನು ತವಕದಿಂದ ಹುಡುಕಿದ್ದೇವೆ.
ನೀನು ಲೋಕದಲ್ಲಿ ನ್ಯಾಯಕಾರ್ಯಗಳನ್ನು ನಡೆಸುವಾಗ ಭೂನಿವಾಸಿಗಳು ಧರ್ಮಜ್ಞಾನವನ್ನು ಪಡೆದುಕೊಳ್ಳುವರು.