Versions
KNV ನಾನು ಬಂದಾಗ ಯಾಕೆ ಅಲ್ಲಿ ಒಬ್ಬನೂ ಇರಲಿಲ್ಲ? ನಾನು ಕರೆದಾಗ ಯಾಕೆ ಯಾರೂ ಉತ್ತರ ಕೊಡಲಿಲ್ಲ? ನನ್ನ ಹಸ್ತವು ವಿಮೋಚಿಸದಂಥಾ ಮೋಟುಗೈಯೋ? ಇಲ್ಲವೇ ಬಿಡಿಸುವದಕ್ಕೆ ನನ್ನಲ್ಲಿ ಶಕ್ತಿಯಿಲ್ಲವೋ? ಇಗೋ, ನನ್ನ ಗದರಿಕೆಯಿಂದ ನಾನು ಸಮುದ್ರವನ್ನು ಒಣಗಿಸುತ್ತೇನೆ. ನಾನು ನದಿಗಳನ್ನು ಅರಣ್ಯವನ್ನಾಗಿ ಮಾಡುತ್ತೇನೆ. ನೀರಿಲ್ಲದ ಕಾರಣ ಅಲ್ಲಿಯ ವಿಾನುಗಳು ಬಾಯಾರಿ ಸತ್ತುನಾರುವವು.
ERVKN ನಾನು ಮನೆಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ. ನಾನು ಎಷ್ಟು ಕರೆದರೂ ಯಾರೂ ಉತ್ತರ ಕೊಡಲಿಲ್ಲ. ನಿಮ್ಮನ್ನು ರಕ್ಷಿಸಲು ನನ್ನಿಂದ ಸಾಧ್ಯವಿಲ್ಲವೆಂದು ನೀವು ನೆನಸುತ್ತೀರಾ? ನಿಮ್ಮ ಎಲ್ಲಾ ಕಷ್ಟಗಳಿಂದ ನಿಮ್ಮನ್ನು ಪಾರುಮಾಡಲು ನನಗೆ ಸಾಮರ್ಥ್ಯವಿದೆ. ಇಗೋ, ನಾನು ಸಮುದ್ರಕ್ಕೆ ಒಣಗಿಹೋಗು ಎಂದು ಹೇಳಿದರೆ ಹಾಗೆಯೇ ಆಗುವದು. ಮೀನುಗಳು ನೀರಿಲ್ಲದೆ ಸತ್ತು ನಾರುವವು.
IRVKN ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ?
ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ?
ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ.
ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.