Versions
KNV ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.
ERVKN ಯೆಹೋವನು ನನ್ನನ್ನು ಸಂತೋಷಭರಿತನನ್ನಾಗಿ ಮಾಡುತ್ತಾನೆ. ನನ್ನ ಸಂಪೂರ್ಣ ವ್ಯಕ್ತಿತ್ವವು ನನ್ನ ದೇವರಲ್ಲಿ ಸಂತೋಷಿಸುತ್ತದೆ. ಯೆಹೋವನು ರಕ್ಷಣೆಯೆಂಬ ವಸ್ತ್ರವನ್ನು ನನಗೆ ತೊಡಿಸಿದ್ದಾನೆ. ಮದುವೆಯಲ್ಲಿ ಮದುಮಗನು ಧರಿಸಿಕೊಳ್ಳುವ ಬಟ್ಟೆಯಂತೆ ಅದು ನಯವಾಗಿದೆ. ಯೆಹೋವನು ನನಗೆ ನೀತಿಯೆಂಬ ನಿಲುವಂಗಿಯನ್ನು ತೊಡಿಸಿರುತ್ತಾನೆ. ಅದು ಮದುಮಗಳು ಮದುವೆಯಲ್ಲಿ ಧರಿಸಿಕೊಳ್ಳುವ ಬಟ್ಟೆಯಂತಿದೆ.
IRVKN ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು.
ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ,
ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.