Versions
KNV ಕರ್ತನು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿ ಆತನು ನ್ಯಾಯಾಧಿಪತಿಯ ಸಂಗಡ ಇದ್ದು ಆ ನ್ಯಾಯಾಧಿಪತಿಯ ದಿನಗಳೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ರಕ್ಷಿಸುತ್ತಿದ್ದನು. ಯಾಕಂದರೆ ಅವರು ತಮ್ಮನ್ನು ಬಾಧಿಸಿ ಶ್ರಮೆಪಡಿಸುವವರ ನಿಮಿತ್ತ ಗೋಳಾಡುವದರಿಂದ ಕರ್ತನು ಪಶ್ಚಾತ್ತಾಪಪಟ್ಟನು.
ERVKN ಅನೇಕ ಸಲ ಶತ್ರುಗಳು ಇಸ್ರೇಲರಿಗೆ ತುಂಬ ಕಷ್ಟಗಳನ್ನು ಉಂಟು ಮಾಡುತ್ತಿದ್ದರು. ಇಸ್ರೇಲರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಿದ್ದರು; ಪ್ರತಿಸಲವೂ ಯೆಹೋವನು ಅವರ ಗೋಳಾಟವನ್ನು ಕೇಳಿ ಮರುಕಪಡುತ್ತಿದ್ದನು. ಪ್ರತಿಸಲವೂ ಅವರನ್ನು ಶತ್ರುಗಳಿಂದ ರಕ್ಷಿಸಲು ಒಬ್ಬ ನ್ಯಾಯಾಧೀಶನನ್ನು ಕಳುಹಿಸಿ ಕೊಡುತ್ತಿದ್ದನು. ಯೆಹೋವನು ಆ ನ್ಯಾಯಾಧೀಶರ ಜೊತೆಯಲ್ಲಿಯೇ ಇರುತ್ತಿದ್ದನು. ಹೀಗಾಗಿ ಪ್ರತಿಸಲವೂ ಇಸ್ರೇಲರನ್ನು ಅವರ ಶತ್ರುಗಳಿಂದ ರಕ್ಷಿಸಲಾಯಿತು.
IRVKN ವೈರಿಗಳ ಹಿಂಸೆಯನ್ನು ತಾಳಲಾರದ ಇಸ್ರಾಯೇಲ್ಯರ ಗೋಳಾಟವನ್ನು ಯೆಹೋವನು ಕೇಳಿ, ಕನಿಕರಪಟ್ಟು, ನ್ಯಾಯಸ್ಥಾಪಕರನ್ನು ಎಬ್ಬಿಸಿ ಜೀವಮಾನವೆಲ್ಲಾ ಅವರ ಸಂಗಡ ಇದ್ದನು. ಅವರ ಮೂಲಕವಾಗಿ ಇಸ್ರಾಯೇಲರನ್ನು ಶತ್ರುಗಳಿಂದ ಬಿಡಿಸಿದನು.