Versions
KNV ಕರ್ತನು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾನೆ; ಯೆಹೂದದ ಮಗಳ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿಹಾಕಿ ದ್ದಾನೆ; ಆತನು ಅವುಗಳನ್ನು ನೆಲ ಸಮ ಮಾಡಿದ್ದಾನೆ; ಆತನು ರಾಜ್ಯವನ್ನೂ ಪ್ರಭುಗಳನ್ನೂ ಅಪವಿತ್ರ ಮಾಡಿದ್ದಾನೆ.
ERVKN ಯೆಹೋವನು ಯಾಕೋಬನ ಮನೆಗಳನ್ನು ನಾಶಪಡಿಸಿದನು. ಆತನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು. ತನ್ನ ಕೋಪದಲ್ಲಿ ಆತನು ಯೆಹೂದದ ಮಗಳ ಕೋಟೆಗಳನ್ನು ನಾಶಪಡಿಸಿದನು. ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅಪ್ಪಳಿಸಿದನು. ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ.
IRVKN ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ,
ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ,
ರಾಜ್ಯವನ್ನೂ ಮತ್ತು ಅಲ್ಲಿನ ಸರದಾರರನ್ನೂ ಹೀನಸ್ಥಿತಿಗೆ ತಂದಿದ್ದಾನೆ.