Versions
KNV ಏಳನೆಯ ದಿನದಲ್ಲಿ ಯಾಜಕನು ಆ ಇಸಬನ್ನು ನೋಡಬೇಕು. ಇಗೋ, ಆ ಇಸಬು ಚರ್ಮದಲ್ಲಿ ಹರಡದಿದ್ದರೆ ನೋಡಲು ಅದು ಚರ್ಮಕ್ಕಿಂತಲೂ ತಗ್ಗಾಗಿರದಿದ್ದರೆ ಯಾಜಕನು ಅವನನ್ನು ಶುದ್ಧನೆಂದು ನುಡಿಯಬೇಕು; ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಶುದ್ಧನಾಗುವನು.
ERVKN ಏಳನೆಯ ದಿನದಲ್ಲಿ ಯಾಜಕನು ರೋಗವನ್ನು ಪರೀಕ್ಷಿಸಬೇಕು. ರೋಗವು ಚರ್ಮದಲ್ಲಿ ಹರಡಿಕೊಳ್ಳದಿದ್ದರೆ ಮತ್ತು ಅದು ಚರ್ಮಕ್ಕಿಂತ ತಗ್ಗಾಗಿ ತೋರದಿದ್ದರೆ ಆಗ ಯಾಜಕನು ಆ ವ್ಯಕ್ತಿಯನ್ನು ಶುದ್ಧನೆಂದು ಪ್ರಕಟಿಸಬೇಕು. ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧನಾಗುವನು.
IRVKN ಏಳನೆಯ ದಿನದಲ್ಲಿ ಯಾಜಕನು ಪುನಃ ಆ ಗಾಯವನ್ನು ನೋಡುವಾಗ ಅದು ಚರ್ಮದಲ್ಲಿ ಹರಡಿಕೊಳ್ಳದೆ ಹೋಗಿದ್ದರೆ ಉಳಿದ ಚರ್ಮಕ್ಕಿಂತ ಆಳವಾಗಿ ತೋರದೆ ಇದ್ದರೆ ಯಾಜಕನು ಅವನನ್ನು ಶುದ್ಧನೆಂದು ನಿರ್ಣಯಿಸಬೇಕು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡಾಗ ಶುದ್ಧನಾಗುವನು.