Versions
KNV ಒಡೆಯನು ಬಂದಾಗ ಯಾರು ಎಚ್ಚರವಾಗಿರುವದನ್ನು ಅವನು ಕಾಣುವನೋ ಆ ಸೇವಕರು ಧನ್ಯರು; ನಾನು ನಿಮಗೆ ನಿಜವಾಗಿ ಹೇಳುತ್ತೇನೆ, ಅವನು ಬಂದು ನಡುಕಟ್ಟಿಕೊಂಡು ಅವರನ್ನು ಊಟಕ್ಕೆ ಕೂಡ್ರಿಸಿ ಅವರಿಗೆ ತಾನೇ ಉಪಚರಿಸುವನು.
ERVKN ಆ ಸೇವಕರೇ ಧನ್ಯರು. ಏಕೆಂದರೆ, ಅವರು ಸಿದ್ಧರಾಗಿದ್ದು ತನಗೋಸ್ಕರ ಕಾಯುತ್ತಿದ್ದುದನ್ನು ಯಜಮಾನನು ನೋಡುತ್ತಾನೆ. ನಾನು ನಿಮಗೆ ಸತ್ಯವಾಗಿ ಹೇಳುವುದೇನಂದರೆ, ಆಗ ಯಜಮಾನನು ತಾನೇ ಸೇವಕರ ಉಡುಪನ್ನು ಧರಿಸಿಕೊಂಡು, ಆ ಸೇವಕರನ್ನು ಕುಳ್ಳಿರಿಸಿ, ಅವರಿಗೆ ಊಟ ಬಡಿಸುತ್ತಾನೆ.
IRVKN ಯಜಮಾನನು ಬಂದು ಯಾವ ಆಳು ಎಚ್ಚರವಾಗಿದ್ದಾನೆಂದು ಕಂಡುಕೊಳ್ಳುವನೋ ಆ ಆಳುಗಳೇ ಧನ್ಯರು. ಏಕೆಂದರೆ, ಯಜಮಾನನೇ ನಡುಕಟ್ಟಿಕೊಂಡು ಆ ಆಳುಗಳನ್ನು ಊಟಕ್ಕೆ ಕುಳ್ಳಿರಿಸಿ, ಹತ್ತಿರಕ್ಕೆ ಬಂದು ಅವರಿಗೆ ಊಟವನ್ನು ಬಡಿಸುವನು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.