Versions
KNV ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN “ಆ ನ್ಯಾಯತೀರ್ಪಿನ ದಿನವು ಬರುತ್ತಿದೆ. ಅದು ಕುಲುಮೆಯಂತೆ ತೀಕ್ಷ್ಣವಾಗಿರುವದು. ಅಹಂಕಾರಿಗಳೆಲ್ಲಾ ಶಿಕ್ಷಿಸಲ್ಪಡುವರು. ದುಷ್ಟಜನರೆಲ್ಲಾ ಹುಲ್ಲಿನಂತೆ ಸುಡುವರು. ಆ ಸಮಯದಲ್ಲಿ ಒಂದು ಪೊದೆ ಬೆಂಕಿಯಲ್ಲಿ ಸುಡುವಂತೆ ಸುಡುವರು. ಆದರೆ ಕೊಂಬೆ ಅಥವಾ ಬೇರು ಯಾವದೂ ಉಳಿಯುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
IRVKN {ಯೆಹೋವನ ನ್ಯಾಯತೀರ್ಪಿನ ದಿನ} PS “ಇಗೋ, ಯೆಹೋವನ ದಿನವು ಬರುತ್ತಿದೆ, ಒಲೆಯಂತೆ ಉರಿಯುತ್ತಿದೆ; ಸಕಲ ಅಹಂಕಾರಿಗಳೂ, ದುಷ್ಕರ್ಮಿಗಳೂ ಒಣಹುಲ್ಲಿನಂತೆ ಇರುವರು. ಬರುತ್ತಿರುವ ಆ ದಿನವು ಅವರಿಗೆ ಅಗ್ನಿಪ್ರಳಯವಾಗುವುದು. ಬುಡ, ರೆಂಬೆಗಳಾವುದನ್ನೂ ಉಳಿಸದು.