Versions
KNV ಅರಸನಾದ ಹೆರೋದನು ಆತನ ವಿಷಯವಾಗಿ ಕೇಳಿದನು. (ಯಾಕಂದರೆ ಆತನ ಹೆಸರು ಎಲ್ಲಾ ಕಡೆಗೂ ಹರಡಿತು); ಮತ್ತು ಅವನು--ಬಾಪ್ತಿಸ್ಮ ಮಾಡಿಸುವ ಯೋಹಾನನು ಸತ್ತವರೊಳಗಿಂದ ಎದ್ದು ಬಂದಿದ್ದಾನೆ; ಆದದರಿಂದ ಮಹತ್ಕಾರ್ಯಗಳು ಅವನಲ್ಲಿ ತೋರಿ ಬರುತ್ತವೆ ಅಂದನು.
ERVKN ಯೇಸು ಪ್ರಸಿದ್ಧನಾಗಿದ್ದುದರಿಂದ ರಾಜನಾದ ಹೆರೋದನಿಗೆ ಯೇಸುವಿನ ವಿಷಯ ತಿಳಿಯಿತು. ಕೆಲವು ಜನರು, “ಇವನು (ಯೇಸು) ಸ್ನಾನಿಕ ಯೋಹಾನ. ಇವನು ಮತ್ತೆ ಬದುಕಿ ಬಂದಿದ್ದಾನೆ. ಆದಕಾರಣವೇ ಈ ಅದ್ಭುತಕಾರ್ಯಗಳನ್ನು ಮಾಡಲು ಶಕ್ತನಾಗಿದ್ದಾನೆ” ಎಂದು ಹೇಳಿದರು.
IRVKN {ಸ್ನಾನಿಕನಾದ ಯೋಹಾನನ ಶಿರಚ್ಛೇದನ} PS ಅಷ್ಟರಲ್ಲಿ ಅರಸನಾದ ಹೆರೋದನು ಯೇಸುವಿನ ಹೆಸರು ಪ್ರಸಿದ್ಧಿಗೆ ಬಂದಿರುವ ವಿಷಯ ಕೇಳಿದನು ಮತ್ತು ಜನರು ಆತನ ವಿಷಯದಲ್ಲಿ, “ಸ್ನಾನಿಕನಾದ ಯೋಹಾನನೇ ತಿರುಗಿ ಬದುಕಿ ಬಂದಿದ್ದಾನೆ; ಆದುದರಿಂದ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿ ಈತನಲ್ಲಿ ಇದೆ” ಎಂದು ಹೇಳುತ್ತಿದ್ದರು.