Versions
KNV ಯಾಕಂದರೆ ಯೋಹಾನನು ನೀತಿಯ ಮಾರ್ಗದಲ್ಲಿ ನಿಮ್ಮ ಬಳಿಗೆ ಬಂದನು. ಮತ್ತು ನೀವು ಅವನನ್ನು ನಂಬಲಿಲ್ಲ; ಆದರೆ ಸುಂಕದವರೂ ಸೂಳೆಯರೂ ಅವನನ್ನು ನಂಬಿದರು; ನೀವು ಅದನ್ನು ನೋಡಿದ ಮೇಲೆಯೂ ಅವನನ್ನು ನಂಬುವಂತೆ ಪಶ್ಚಾತ್ತಾಪ ಪಡಲಿಲ್ಲ.
ERVKN ನೀವು ಜೀವಿಸತಕ್ಕ ಸರಿಯಾದ ಮಾರ್ಗವನ್ನು ತೋರಿಸಲು ಯೋಹಾನನು ಬಂದನು. ನೀವು ಯೋಹಾನನನ್ನು ನಂಬಲಿಲ್ಲ, ಆದರೆ ಸುಂಕ ವಸೂಲಿಗಾರರು ಮತ್ತು ವೇಶ್ಯೆಯರು ನಂಬಿದ್ದನ್ನು ನೀವು ನೋಡಿದ್ದೀರಿ. ಆದರೆ ನೀವಿನ್ನೂ ಬದಲಾವಣೆ ಹೊಂದಲು ಮತ್ತು ಅವನನ್ನು ನಂಬಲು ಇಷ್ಟಪಡುತ್ತಿಲ್ಲ.
IRVKN ಯಾಕೆಂದರೆ, ಯೋಹಾನನು ನೀತಿಮಾರ್ಗವನ್ನು ಬೋಧಿಸುವವನಾಗಿ ನಿಮ್ಮ ಬಳಿಗೆ ಬಂದನು. ನೀವು ಅವನನ್ನು ನಂಬಲಿಲ್ಲ; ಸುಂಕದವರು, ವೇಶ್ಯೆಯರು ಅವನನ್ನು ನಂಬಿದರು; ನೀವು ಇದನ್ನು ನೋಡಿದ್ದಾಗ್ಯೂ ಪಶ್ಚಾತ್ತಾಪ ಪಡಲಿಲ್ಲ, ಅವನನ್ನು ನಂಬಲಿಲ್ಲ. PEPS