Versions
KNV ಆಕಾಶವೂ ಭೂಮಿಯೂ ಗತಿಸಿ ಹೋಗುವ ತನಕ ಎಲ್ಲವೂ ನೆರವೇರದ ಹೊರತು ನ್ಯಾಯಪ್ರಮಾಣದಿಂದ ಒಂದು ಸೊನ್ನೆಯಾದರೂ ಒಂದು ಗುಡುಸಾದರೂ ಅಳಿದು ಹೋಗುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.
ERVKN ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಆಕಾಶ ಮತ್ತು ಭೂಮಿ ಅಳಿದುಹೋಗುವವರೆಗೂ ಧರ್ಮಶಾಸ್ತ್ರದಿಂದ ಏನೂ ಅಳಿದುಹೋಗುವುದಿಲ್ಲ. ಎಲ್ಲಾ ನೆರವೇರುವ ತನಕ ಧರ್ಮಶಾಸ್ತ್ರದ ಒಂದು ಅಕ್ಷರವಾಗಲಿ ಅಥವಾ ಅದರ ಒಂದು ಚುಕ್ಕೆಯಾಗಲಿ ಅಳಿದುಹೋಗುವುದಿಲ್ಲ.
IRVKN ನಿಮಗೆ ಸತ್ಯವಾಗಿ ಹೇಳುತ್ತೇನೆ, § ಮತ್ತಾ 24:35; ಲೂಕ 16:17 ಆಕಾಶವೂ ಭೂಮಿಯೂ ಅಳಿದುಹೋಗುವ ತನಕ ಧರ್ಮನಿಯಮವೆಲ್ಲಾ ನೆರವೇರಿದ ಹೊರತು ಅದರೊಳಗಿಂದ ಒಂದು ಚುಕ್ಕೆಯಾಗಲಿ, ಒಂದು ಅಕ್ಷರವಾಗಲಿ ಅಳಿದುಹೋಗುವುದಿಲ್ಲ.