Versions
KNV ಆದರೆ ಅಪರಾಧಕ್ಕೆ ಬದಲು ಕೊಡುವದಕ್ಕೆ ಆ ಮನುಷ್ಯನಿಗೆ ಸಂಬಂಧಿಕನು ಇಲ್ಲದಿದ್ದರೆ ಸಲ್ಲಿಸಿದ ಆ ಅಪರಾಧವು ಅವನ ನಿಮಿತ್ತ ಪಾಪ ಮುಚ್ಚುವ ಟಗರಿನ ಹೊರತಾಗಿ ಅದು ಕರ್ತನದೂ ಯಾಜಕನದೂ ಆಗಿರಬೇಕು.
ERVKN ದಂಡವನ್ನು ತೆಗೆದುಕೊಳ್ಳತಕ್ಕವನು ತೀರಿಹೋಗಿ, ಹತ್ತಿರ ಸಂಬಂಧಿಯೂ ಇಲ್ಲದ ಪಕ್ಷಕ್ಕೆ, ಆ ದ್ರವ್ಯವನ್ನು ಯೆಹೋವನಿಗೆ ಕೊಡಬೇಕು. ಅವನು ಯಾಜಕನಿಗೆ ಪೂರ್ಣ ಬೆಲೆಯನ್ನು ಕೊಡಬೇಕು. ತಪ್ಪು ಮಾಡಿದವನು ಯಾಜಕನಿಗೆ ಒಂದು ಟಗರನ್ನೂ ತಂದುಕೊಡಬೇಕು. ಈ ಟಗರನ್ನು ತಪ್ಪುಮಾಡಿದವನ ಪ್ರಾಯಶ್ಚಿತ್ತಕ್ಕಾಗಿ ಯಜ್ಞಮಾಡಬೇಕು. ಆದರೆ ಉಳಿದದ್ದನ್ನು ಯಾಜಕನು ಇಟ್ಟುಕೊಳ್ಳಬಹುದು.
IRVKN “ಆದರೆ ದಂಡವನ್ನು ತೆಗೆದುಕೊಳ್ಳುವವನು ಮೃತನಾಗಿ ಅವನ ಸಂಬಂಧಿಕರು ಯಾರೂ ಇಲ್ಲದಿದ್ದರೆ, ಆ ದ್ರವ್ಯವು ಯೆಹೋವನಿಗೆ ಸೇರಬೇಕು. ಆ ದ್ರವ್ಯ ಮತ್ತು ದೋಷಪರಿಹಾರಕ್ಕಾಗಿ ಸಮರ್ಪಿಸಲ್ಪಡುವ ಪ್ರಾಯಶ್ಚಿತ್ತದ ಟಗರು ಈ ಎರಡೂ ಯಾಜಕನಿಗೆ ಸೇರಬೇಕು.