Versions
KNV ಆದರೂ ಆದಾಮನಿಂದ ಮೋಶೆಯವರೆಗೂ ಮರಣದ ಆಳಿಕೆಯು ನಡೆಯುತ್ತಿತ್ತು. ಆದಾಮನ ಆ ಅತಿಕ್ರಮಣಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. ಆ ಆದಾಮನು ಬರಬೇಕಾದ ಒಬ್ಬಾತನಿಗೆ ಸೂಚನೆ ಯಾಗಿದ್ದಾನೆ.
ERVKN ಆದರೆ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೆ ಎಲ್ಲಾ ಜನರು ಸಾಯಲೇಬೇಕಾಯಿತು. ಆದಾಮನು ಪಾಪ ಮಾಡಿದ್ದರಿಂದ ಸತ್ತನು. ದೇವರ ಆಜ್ಞೆಗೆ ಅವಿಧೇಯನಾದದ್ದೇ ಆ ಪಾಪ. ಆದರೆ ಆದಾಮನು ಮಾಡಿದ ಪಾಪಕ್ಕೆ ಸರಿಸಮಾನವಾದ ಪಾಪವನ್ನು ಮಾಡಿಲ್ಲದವರು ಸಹ ಸಾಯಬೇಕಾಯಿತು. ಆದಾಮನು ಮುಂದಿನ ಕಾಲದಲ್ಲಿ ಬರಲಿದ್ದ ಒಬ್ಬಾತನಿಗೆ (ಕ್ರಿಸ್ತನಿಗೆ) ಮುನ್ಸೂಚನೆಯಾಗಿದ್ದನು.
IRVKN ಆದರೂ ಆದಾಮನ ಕಾಲದಿಂದ ಮೋಶೆಯ ಕಾಲದವರೆಗೂ ಮರಣದ ಆಳ್ವಿಕೆಯು ನಡೆಯುತ್ತಿತ್ತು. ಆದಾಮನು ದೇವರ ಆಜ್ಞೆಯನ್ನು ಮೀರಿ ಮಾಡಿದ ಪಾಪಕ್ಕೆ ಸಮಾನವಾದ ಪಾಪವನ್ನು ಮಾಡದೆ ಇದ್ದವರ ಮೇಲೆಯೂ ಅದು ನಡೆಯುತ್ತಿತ್ತು. * 1 ಕೊರಿ 15:45 ಆ ಆದಾಮನು ಬರಬೇಕಾದ ಒಬ್ಬಾತನಾದ ಕ್ರಿಸ್ತನಿಗೆ ಪ್ರತಿರೂಪನಾಗಿದ್ದಾನೆ. PEPS