Versions
KNV ನನ್ನದಾದ ನನ್ನ ದ್ರಾಕ್ಷೇ ತೋಟವು ನನ್ನ ಮುಂದೆ ಅದೆ. ಓ ಸೊಲೊಮೋನನೇ, ನಿನಗೆ ಒಂದು ಸಾವಿರ ಇರತಕ್ಕದ್ದು. ಅದರ ಫಲವನ್ನು ಕಾಪಾಡುವವರಿಗೆ ಇನ್ನೂರು ಆಗಲಿ.
ERVKN ಆದರೆ ನನ್ನ ಸ್ವಂತ ದ್ರಾಕ್ಷಿತೋಟವು ನನ್ನೆದುರಿನಲ್ಲಿದೆ. ಸೊಲೊಮೋನನೇ, ಆ ಸಾವಿರ ಬೆಳ್ಳಿನಾಣ್ಯಗಳು ನಿನಗಿರಲಿ. ತೋಟವನ್ನು ನೋಡಿಕೊಳ್ಳುವವರಿಗೆ ಇನ್ನೂರು ಬೆಳ್ಳಿನಾಣ್ಯಗಳಿರಲಿ.
IRVKN ಸೊಲೊಮೋನನೇ, ಆ ಸಾವಿರ ಬೆಳ್ಳಿ ನಾಣ್ಯ ನಿನಗಿರಲಿ,
ಅದರ ಮೇಲ್ವಿಚಾರಕರಿಗೆ ಇನ್ನೂರು ನಾಣ್ಯ ಸೇರಲಿ;
ನನ್ನದೇ ಆಗಿರುವ ನನ್ನ ತೋಟವು ನನ್ನ ವಶದಲ್ಲಿಯೇ ಇದೆ.