Bible Versions
Bible Books

1 Kings 7:14 (NASU) New American Standard Bible (Updated)

Versions

KNV   ಇವನು ನಫ್ತಾಲಿಯ ಗೋತ್ರದವಳಾದ ಒಬ್ಬ ವಿಧವೆಯ ಮಗನು; ಅವನ ತಂದೆ ತೂರಿನ ಮನುಷ್ಯನಾದ ತಾಮ್ರದ ಕೆಲಸದವನಾಗಿದ್ದನು; ಅವನು ತಾಮ್ರದ ಎಲ್ಲಾ ಕೆಲಸವನ್ನು ಮಾಡತಕ್ಕ ಜ್ಞಾನ ದಿಂದಲೂ ಗ್ರಹಿಕೆಯಿಂದಲೂ ತಿಳುವಳಿಕೆಯಿಂದಲೂ ಪೂರ್ಣನಾಗಿದ್ದನು. ಅವನು ಅರಸನಾದ ಸೊಲೊ ಮೋನನ ಬಳಿಗೆ ಬಂದು ಅವನ ಕೆಲಸವನ್ನೆಲ್ಲಾ ಮಾಡಿದನು.
ERVKN   ಹೀರಾಮನ ತಾಯಿಯು ನಫ್ತಾಲಿ ಕುಲದವಳಾಗಿದ್ದಳು ಮತ್ತು ಇಸ್ರೇಲಿನವಳಾಗಿದ್ದಳು. ಅವನ ದಿವಂಗತ ತಂದೆಯು ತೂರಿನವನಾಗಿದ್ದನು. ಹೀರಾಮನು ಹಿತ್ತಾಳೆಯಿಂದ ವಸ್ತುಗಳನ್ನು ತಯಾರಿಸುತ್ತಿದ್ದನು. ಅವನು ಕುಶಲಕರ್ಮಿಯೂ ಅನುಭವಿಯೂ ಆದ ಕೆಲಸಗಾರನಾಗಿದ್ದನು. ರಾಜನಾದ ಸೊಲೊಮೋನನು ಹೀರಾಮನಿಗೆ ಬರಲು ಹೇಳಿದಾಗ, ಅವನು ಒಪ್ಪಿಕೊಂಡನು. ರಾಜನಾದ ಸೊಲೊಮೋನನು ಎಲ್ಲಾ ಹಿತ್ತಾಳೆಯ ಕಾರ್ಯಗಳಿಗೆ ಹೀರಾಮನನ್ನು ಮೇಲ್ವಿಚಾರಕನನ್ನಾಗಿ ನೇಮಿಸಿದನು. ಹೀರಾಮನು ಹಿತ್ತಾಳೆಯ ವಸ್ತುಗಳನ್ನು ನಿರ್ಮಿಸಿದನು.
IRVKN   ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us