Versions
KNV ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ--ನಿಜವಾಗಿಯೂ ಕರ್ತನಾಣೆ, ನೀನು ಯಥಾರ್ಥನು, ನೀನು ನನ್ನ ಸಂಗಡ ದಂಡಿನಲ್ಲಿ ಹೋಗುತ್ತಾ ಬರುತ್ತಾ ಇರುವದು ನನ್ನ ದೃಷ್ಟಿಗೆ ಒಳ್ಳೇದು. ನೀನು ನನ್ನ ಬಳಿಗೆ ಬಂದ ದಿನದಿಂದ ಈವರೆಗೂ ನಿನ್ನಲ್ಲಿ ಕೆಟ್ಟದ್ದನ್ನು ಕಂಡದ್ದಿಲ್ಲ.
ERVKN ಆದ್ದರಿಂದ ಆಕೀಷನು ದಾವೀದನನ್ನು ಕರೆದು, “ಯೆಹೋವನಾಣೆ, ನೀನು ನನಗೆ ಯಥಾರ್ಥನಾಗಿರುವೆ. ನೀನು ನನ್ನ ಸೈನ್ಯದಲ್ಲಿ ಸೇವೆ ಮಾಡುವುದೂ ನನಗೆ ಇಷ್ಟ. ನೀನು ನನ್ನ ಹತ್ತಿರಕ್ಕೆ ಬಂದಾಗಿನಿಂದ ನಾನು ನಿನ್ನಲ್ಲಿ ಯಾವ ತಪ್ಪನ್ನೂ ಗುರುತಿಸಿಲ್ಲ. ನೀನು ಒಳ್ಳೆಯವನೆಂದು ಫಿಲಿಷ್ಟಿಯರ ಅಧಿಪತಿಗಳು ಸಹ ಯೋಚಿಸಿದ್ದಾರೆ.
IRVKN ಆಗ ಆಕೀಷನು ದಾವೀದನನ್ನು ಕರೆದು ಅವನಿಗೆ, “ಯೆಹೋವನಾಣೆ ನೀನು ಯಥಾರ್ಥನು. ನೀನು ನನ್ನ ಸಂಗಡ ಪಾಳೆಯದಲ್ಲಿದ್ದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇರುವುದು ಯುಕ್ತವೆಂದು ನನಗೆ ತೋರಿತು. ನೀನು ಬಂದಂದಿನಿಂದ ಇಂದಿನವರೆಗೂ ನಾನು ನಿನ್ನಲ್ಲಿ ಯಾವ ದೋಷವನ್ನೂ ಕಾಣಲಿಲ್ಲ.