Versions
KNV ಅವನು ಯೆಹೂದದವರಿಗೆ--ದೇಶವು ನಮ್ಮ ಮುಂದೆ ಇರು ವಾಗ ಈ ಪಟ್ಟಣಗಳನ್ನು ಕಟ್ಟಿಸಿ ಅವುಗಳ ಸುತ್ತಲೂ ಗೋಡೆಗಳನ್ನೂ ಗೋಪುರಗಳನ್ನೂ ಬಾಗಲುಗಳನ್ನೂ ಅಗುಳಿಗಳನ್ನೂ ಮಾಡೋಣ; ಯಾಕಂದರೆ ನಾವು ನಮ್ಮ ದೇವರಾದ ಕರ್ತನನ್ನು ಹುಡುಕಿದೆವು; ನಾವು ಆತನನ್ನು ಹುಡುಕಿದ್ದರಿಂದ ಆತನು ಎಲ್ಲಾ ಕಡೆಯಲ್ಲಿ ನಮಗೆ ವಿಶ್ರಾಂತಿಯನ್ನು ಕೊಟ್ಟಿದ್ದಾನೆ ಅಂದನು.
ERVKN ಆಸನು ಜನರಿಗೆ, “ನಾವು ಈ ಪಟ್ಟಣಗಳ ಸುತ್ತಲೂ ಕೋಟೆಯನ್ನು ಕಟ್ಟೋಣ; ಬುರುಜುಗಳನ್ನೂ ಕದಗಳನ್ನೂ ಭದ್ರಪಡಿಸೋಣ. ನಾವು ನಮ್ಮ ದೇವರಾದ ಯೆಹೋವನನ್ನು ಅನುಸರಿಸುವದರಿಂದ ಈ ದೇಶವು ನಮ್ಮದಾಗಿರುತ್ತದೆ. ಆದುದರಿಂದ ನಾವು ಹೀಗೆ ಮಾಡೋಣ. ಆತನು ನಮ್ಮ ಸುತ್ತಲೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ” ಎಂದು ಹೇಳಿದನು. ಅಂತೆಯೇ ಅವರು ಕಟ್ಟಿ ಪೂರೈಸಿದರು.
IRVKN ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ, ಅವುಗಳನ್ನು ಸುತ್ತಣ ಗೋಡೆ, ಗೋಪುರ, ಬುರುಜು ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ” ಎನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.