Bible Versions
Bible Books

2 Chronicles 33:14 (NASU) New American Standard Bible (Updated)

Versions

KNV   ಇದಾದ ತರುವಾಯ ಮನಸ್ಸೆಯು ದಾವೀದನ ಪಟ್ಟಣದ ಹೊರಭಾಗದಲ್ಲಿ ಗೀಹೋನಿನ ಪಶ್ಚಿಮ ಕಡೆಯ ತಗ್ಗಿನಲ್ಲಿ ವಿಾನುಬಾಗಲ ದ್ವಾರದ ವರೆಗೆ ಓಫೆಲ್‌ ಸುತ್ತಲೂ ಗೋಡೆಯನ್ನು ಕಟ್ಟಿಸಿ ಅದನ್ನು ಬಹಳ ಎತ್ತರ ಮಾಡಿ ಯೆಹೂದದ ಸಮಸ್ತ ಕೋಟೆ ಯುಳ್ಳ ಪಟ್ಟಣಗಳಲ್ಲಿ ಸೈನ್ಯದ ಅಧಿಪತಿಗಳನ್ನು ಇಟ್ಟನು.
ERVKN   ಇದಾದ ನಂತರ ಮನಸ್ಸೆಯು ದಾವೀದನಗರಕ್ಕೆ ಹೊರಗಿನ ಗೋಡೆಯನ್ನು ಕಟ್ಟಿಸಿದನು. ಗೋಡೆಯು ಕಿದ್ರೋನಿನಲ್ಲಿದ್ದ ಗೀಹೋನ್ ಬುಗ್ಗೆಯ ಪಶ್ಚಿಮ ದಿಕ್ಕಿನಿಂದ ಮೀನು ಬಾಗಿಲಿನ ಮುಂದೆ ಹೋಗಿ, ಅಲ್ಲಿಂದ ಓಫೆಲ್ ಗುಡ್ಡಕ್ಕೆ ಸುತ್ತು ಹಾಕಿತು. ಅವನು ಗೋಡೆಯನ್ನು ಬಹು ಎತ್ತರವಾಗಿ ಕಟ್ಟಿದನು. ಆಮೇಲೆ ಯೆಹೂದದಲ್ಲಿದ್ದ ಎಲ್ಲಾ ಕೋಟೆಗಳಲ್ಲಿ ಸೇನಾಪತಿಗಳನ್ನು ನೇಮಿಸಿದನು;
IRVKN   ಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us