Bible Versions
Bible Books

2 Samuel 18:3 (NASU) New American Standard Bible (Updated)

Versions

KNV   ಆದರೆ ಜನರು ಅವನಿಗೆ--ನೀನು ನಮ್ಮ ಸಂಗಡ ಬರಬೇಡ; ಯಾಕಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸರಿಯಾಗಿದ್ದೀ. ಈಗ ನೀನು ಪಟ್ಟಣದಲ್ಲಿದ್ದು ನಮಗೆ ಸಹಾಯವಾಗಿರುವದು ಉತ್ತಮ ಅಂದರು.
ERVKN   ಆದರೆ ಅವರು, “ಬೇಡ, ನೀನು ನಮ್ಮ ಜೊತೆ ಬರುವುದು ಬೇಡ. ಏಕೆಂದರೆ ನಾವು ಯುದ್ಧರಂಗದಿಂದ ಓಡಿಹೋಗಿಬಿಟ್ಟರೆ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ನಮ್ಮಲ್ಲಿ ಅರ್ಧದಷ್ಟು ಜನರು ಸತ್ತರೂ, ಅಬ್ಷಾಲೋಮನ ಜನರು ಲಕ್ಷಿಸುವುದಿಲ್ಲ. ಆದರೆ ನೀನು ನಮ್ಮ ಹತ್ತು ಸಾವಿರ ಜನರಷ್ಟು ಬೆಲೆಯುಳ್ಳವನಾಗಿರುವೆ! ನೀನು ನಗರದಲ್ಲಿರುವುದೇ ಉತ್ತಮ. ಅಲ್ಲಿಂದಲೇ ನೀನು ನಮಗೆ ಸಹಾಯ ಮಾಡಬಹುದು” ಎಂದು ಹೇಳಿದರು.
IRVKN   ಆಗ ಸೈನ್ಯದವರು ಅವನಿಗೆ, “ನೀನು ಬರಬಾರದು. ನಾವು ಸೋತು ಓಡಿಹೋದರೆ ಶತ್ರುಗಳು ಅದನ್ನು ಗಮನಿಸುವುದಿಲ್ಲ. ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅದು ಅವರಿಗೆ ದೊಡ್ಡ ಲಾಭವಲ್ಲ. ನಮ್ಮಂಥ * ಅಥವಾ ನಮ್ಮಂತೆಯೇ ಹತ್ತು ಸಾವಿರ ಮಂದಿ ಇದ್ದಾರೆ. ಹತ್ತು ಸಾವಿರ ಜನರಿಗಿರುವ ಬೆಲೆ ನಿನ್ನೊಬ್ಬನಿಗೆ ಉಂಟು. ನೀನು ಊರಲ್ಲಿದ್ದುಕೊಂಡು ಅಲ್ಲಿಂದಲೇ ನಮಗೆ ಬೇಕಾದ ಸಹಾಯ ಮಾಡಬಹುದು” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us