Versions
KNV ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು.
ERVKN ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೇ ನೀವು ಅಡ್ಡಬೀಳಬೇಕು. ಇದು ರಾಜಾಜ್ಞೆ. ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಬಂಗಾರದ ವಿಗ್ರಹವನ್ನು ಪೂಜಿಸಬೇಕು. ಅರಸನಾದ ನೆಬೂಕದ್ನೆಚ್ಚರನು ಈ ವಿಗ್ರಹವನ್ನು ನಿಲ್ಲಿಸಿದ್ದಾನೆ.
IRVKN ನೀವು ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅಡ್ಡಬಿದ್ದು, ರಾಜನಾದ ನೆಬೂಕದ್ನೆಚ್ಚರನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಪೂಜಿಸಬೇಕು.