Versions
KNV ಪೂರ್ವದ ದಿವಸಗಳನ್ನು ಜ್ಞಾಪಕಮಾಡಿಕೊ; ತಲ ತಲಾಂತರಗಳ ವರುಷಗಳನ್ನು ಗ್ರಹಿಸಿಕೊ; ನಿನ್ನ ತಂದೆ ಯನ್ನು ಕೇಳು, ಅವನು ನಿನಗೆ ತಿಳಿಸುವನು. ನಿನ್ನ ಹಿರಿಯರನ್ನು ಕೇಳು, ಅವರು ನಿನಗೆ ಹೇಳುವರು.
ERVKN ಹಿಂದೆ ಏನಾಯಿತೆಂದು ಜ್ಞಾಪಕಕ್ಕೆ ತಂದುಕೊಳ್ಳಿರಿ. ಬಹಳ ವರ್ಷಗಳ ಹಿಂದೆ ನಡೆದದ್ದನ್ನು ಜ್ಞಾಪಕ ಮಾಡಿಕೊಳ್ಳಿರಿ. ನಿಮ್ಮ ತಂದೆಗಳನ್ನು ಕೇಳಿ, ಅವರು ಹೇಳುವರು. ನಿಮ್ಮ ಹಿರಿಯರನ್ನು ವಿಚಾರಿಸಿ, ಅವರು ಹೇಳುವರು.
IRVKN ಪೂರ್ವಕಾಲವನ್ನು ನೆನಪಿಗೆ ತಂದುಕೊಳ್ಳಿರಿ; ನಿಮ್ಮ ಪೂರ್ವಜರ ಚರಿತ್ರೆಯನ್ನು ಆಲೋಚಿಸಿರಿ.
ನಿಮ್ಮ ನಿಮ್ಮ ತಂದೆಗಳನ್ನು ವಿಚಾರಿಸಿದರೆ ಅವರು ತಿಳಿಸುವರು; ಹಿರಿಯರನ್ನು ಕೇಳಿದರೆ ಅವರು ವಿವರಿಸುವರು.