Versions
KNV ಅದು ನನಗೆ ಆನಂದದ ಹೆಸರೂ ನಾನು ಅವರಿಗೆ ಒಳ್ಳೇದನ್ನೆಲ್ಲಾ ಮಾಡುವದನ್ನು ಕೇಳುವ ಭೂಮಿಯಲ್ಲಿರುವ ಎಲ್ಲಾ ಜನಾಂಗಗಳ ಮುಂದೆ ಸ್ತೋತ್ರವೂ ಮಹಿಮೆಯೂ ಆಗುವದು; ನಾನು ಅದಕ್ಕೆ ಉಂಟು ಮಾಡುವ ಮೇಲಿಗಾಗಿಯೂ ಎಲ್ಲಾ ಅಭಿವೃದ್ಧಿಗಾಗಿಯೂ ಅವರು ಹೆದರಿ ನಡುಗುವರು.
ERVKN ಆಗ ಜೆರುಸಲೇಮ್ ಒಂದು ಅದ್ಭುತವಾದ ಸ್ಥಳವಾಗುವುದು; ಜನರು ಸಂತೋಷದಿಂದಿರುವರು. ಅಲ್ಲಿ ನಡೆದ ಒಳ್ಳೆಯ ಸಂಗತಿಗಳ ಘಗ್ಗೆ ಕೇಳಿದಾಗ ಙೇರೆ ಜನಾಂಗಗಳ ಜನರು ಅದನುಐ ಹೊಗಳುವರು; ವಿಸ್ಮಯಪಡುವರು. ನಾನು ಜೆರುಸಲೇಮಿಗೆ ಮಾಡುತ್ತಿರುವ ಒಳಿತಿನ ವಿಷಯವು ಅವರ ಕಿವಿಗೆ ಬೀಳುವುದು.’
IRVKN ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’ ”