Bible Versions
Bible Books

Jonah 4:8 (NASU) New American Standard Bible (Updated)

Versions

KNV   ಆದದ್ದೇನಂದರೆ, ಸೂರ್ಯೋದಯವಾದಾಗ ದೇವರು ಉಗ್ರವಾದ ಮೂಡಣ ಗಾಳಿಯನ್ನು ಸಿದ್ಧ ಮಾಡಿದನು; ಆಗ ಬಿಸಿಲು ಯೋನನ ತಲೆಯ ಮೇಲೆ ಬಡಿದದ್ದರಿಂದ ಅವನು ಮೂರ್ಛೆಹೋಗಿ ತನ್ನಲ್ಲಿ ಮರಣವನ್ನು ಕೇಳಿಕೊಂಡು--ನಾನು ಬದುಕುವದಕ್ಕಿಂತ ಸಾಯುವದು ಒಳ್ಳೇದು ಅಂದನು.
ERVKN   ಸೂರ್ಯನು ಆಕಾಶದಲ್ಲಿ ಏರಿ ಬಂದಾಗ ದೇವರು ಪೂರ್ವದ ಬಿಸಿಗಾಳಿ ಬೀಸುವಂತೆ ಮಾಡಿದನು. ಬಿಸಿಲಿನ ತಾಪವು ಯೋನನ ತಲೆಯ ಮೇಲೆ ಹೆಚ್ಚಾಯಿತು. ಯೋನನಿಗೆ ಶಾಖ ತಡೆಯಲಾಗಲಿಲ್ಲ. ಬಹಳ ಬಲಹೀನನಾದನು. ನನ್ನನ್ನು ಸಾಯಿಸು ಎಂದು ಯೋನನು ದೇವರನ್ನು ಬೇಡುತ್ತಾ, “ದೇವರೇ, ನಾನು ಬದುಕುವದಕ್ಕಿಂತ ಸಾಯುವುದೇ ಲೇಸು” ಅಂದನು.
IRVKN   ಸೂರ್ಯನು ಉದಯಿಸಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆಹೋಗುವವನಾಗಿ “ನಾನು ಬದುಕುವುದಕ್ಕಿಂತ ಸಾಯುವುದೇ ಲೇಸು” ಎಂದು ಸಾಯಲು ಬಯಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us