Versions
KNV ನೀವು ವಾಸವಾಗಿದ್ದ ಐಗುಪ್ತದೇಶದ ಕೃತ್ಯಗಳಂತೆ ಮಾಡಬಾರದು; ನಾನು ನಿಮ್ಮನ್ನು ತರುವದಕ್ಕಿರುವ ಕಾನಾನ್ದೇಶದ ಕೃತ್ಯಗಳಂತೆ ನೀವು ಮಾಡಬಾರದು ಇಲ್ಲವೆ ನೀವು ಅವರ ನಿಯಮಗಳಿಗನುಸಾರವೂ ನಡೆ ಯಬಾರದು.
ERVKN ಹಿಂದೆ ನೀವು ಈಜಿಪ್ಟಿನಲ್ಲಿ ವಾಸಿಸಿದಿರಿ. ಈಜಿಪ್ಟಿನ ಜನರು ಆಚರಿಸುವ ಆಚಾರಗಳನ್ನು ನೀವು ಅನುಸರಿಸಬಾರದು. ಆ ದೇಶದಲ್ಲಿ ಮಾಡುತ್ತಿದ್ದ ಕಾರ್ಯಗಳನ್ನು ನೀವು ಮಾಡಬಾರದು. ನಾನು ನಿಮ್ಮನ್ನು ಕಾನಾನಿಗೆ ನಡೆಸುತ್ತಿದ್ದೇನೆ. ಆ ದೇಶದಲ್ಲಿ ಮಾಡುವ ಕಾರ್ಯಗಳನ್ನು ನೀವು ಮಾಡಕೂಡದು. ಅವರ ಸಂಪ್ರದಾಯಗಳನ್ನು ಅನುಸರಿಸಬೇಡಿ.
IRVKN ನೀವು ವಾಸವಾಗಿದ್ದ ಐಗುಪ್ತ ದೇಶದ ಆಚಾರಗಳನ್ನು ಅನುಸರಿಸಬಾರದು; ನಾನು ನಿಮ್ಮನ್ನು ಬರಮಾಡುವ ಕಾನಾನ್ ದೇಶದ ಆಚರಣೆಗಳನ್ನು ನೀವು ಅನುಸರಿಸಬಾರದು, ಅವರಲ್ಲಿರುವ ನಿಯಮಗಳಿಗೆ ನೀವು ಒಳಗಾಗಬಾರದು.