Versions
KNV ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
ERVKN ನೀವು ಅರ್ಪಿಸುವ ಪ್ರತಿ ಧಾನ್ಯಸಮರ್ಪಣೆಯಲ್ಲೂ ಉಪ್ಪನ್ನು ಹಾಕಬೇಕು. ನಿಮ್ಮ ಧಾನ್ಯಸಮರ್ಪಣೆಯಲ್ಲಿ ದೇವರ ಒಡಂಬಡಿಕೆಯೆಂಬ ಉಪ್ಪು ಇರಬೇಕು. ನೀವು ಅರ್ಪಿಸುವ ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉಪ್ಪನ್ನು ಸೇರಿಸಬೇಕು.”
IRVKN ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. * ಅಕ್ಷರಶಃ - ಒಡಂಬಡಿಕೆಯ ಉಪ್ಪು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವುದರಿಂದ ಅದು ಯಾವ ನೈವೇದ್ಯ ಪದಾರ್ಥವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪನ್ನು ಸೇರಿಸಲೇಬೇಕು. PEPS