Versions
KNV ಅವನು ಆರೋನನಿಗೆ ಹೇಳಿದ್ದೇನಂದರೆ--ಪಾಪದ ಬಲಿಗಾಗಿ ಒಂದು ಎಳೆಯ ಕರುವನ್ನೂ ದಹನ ಬಲಿಗಾಗಿ ದೋಷವಿಲ್ಲದ ಟಗರನ್ನೂ ನೀನು ತೆಗೆದು ಕೊಂಡು ಅವುಗಳನ್ನು ಕರ್ತನ ಸನ್ನಿಧಿಯಲ್ಲಿ ಸಮರ್ಪಿಸು.
ERVKN ಮೋಶೆಯು ಆರೋನನಿಗೆ ಹೀಗೆಂದನು; “ಒಂದು ಎಳೆಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊ. ಆ ಪಶುಗಳಲ್ಲಿ ಏನೂ ದೋಷವಿರಬಾರದು. ಹೋರಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಟಗರನ್ನು ಸರ್ವಾಂಗಹೋಮವಾಗಿಯೂ ಯೆಹೋವನಿಗೆ ಸಮರ್ಪಿಸು.
IRVKN ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು.