Versions
KNV ಇದು ನಿನ್ನದಾಗಿದೆ. ಅವರು ಕೊಟ್ಟ ಎತ್ತುವ ಅರ್ಪಣೆಯೂ ಇಸ್ರಾಯೇಲ್ ಮಕ್ಕಳು ಆಡಿಸುವ ಎಲ್ಲಾ ಅರ್ಪಣೆಗಳೂ; ಅವುಗಳನ್ನು ನಾನು ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ಶಾಶ್ವತ ಕಟ್ಟಳೆಯಾಗಿ ಕೊಟ್ಟಿದ್ದೇನೆ; ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನು ಅದನ್ನು ತಿನ್ನಬಹುದು.
ERVKN “ಅದಲ್ಲದೆ, ಅವರ ಪ್ರತಿಷ್ಠಿತಾ ಕಾಣಿಕೆಗಳು ಮತ್ತು ಇಸ್ರೇಲರ ನಿವಾಳಿಸಲ್ಪಟ್ಟ ಕಾಣಿಕೆಗಳು ನಿಮಗೆ ಸೇರಿವೆ. ಅವುಗಳನ್ನು ನಾನು ನಿನಗೂ ನಿನ್ನ ಗಂಡುಮಕ್ಕಳಿಗೂ ಹೆಣ್ಣುಮಕ್ಕಳಿಗೂ ಶಾಶ್ವತವಾದ ಪಾಲಾಗಿ ಕೊಡುವೆನು.
IRVKN “ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.