Versions
KNV ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
ERVKN “ನೀನು ಲೇವಿಯರಿಗೆ ಇದನ್ನು ತಿಳಿಸಬೇಕು: ಇಸ್ರೇಲರು ತಮ್ಮ ಆದಾಯದಲ್ಲಿ ಕೊಡುವ ದಶಾಂಶವನ್ನು ನಿಮ್ಮ ಪಾಲೆಂದು ನಾನು ನಿಗದಿಪಡಿಸಿದ್ದೇನೆ. ಇಸ್ರೇಲರು ದಶಾಂಶ ಕೊಟ್ಟಾಗ ನೀವು ಆ ದಶಾಂಶದಲ್ಲಿ ಹತ್ತನೆಯ ಒಂದು ಭಾಗವನ್ನು ಯೆಹೋವನಿಗೆ ಸಲ್ಲಿಸಬೇಕು.
IRVKN “ನೀನು ಲೇವಿಯರಿಗೆ ಹೀಗೆ ಆಜ್ಞಾಪಿಸಬೇಕು, ‘ಇಸ್ರಾಯೇಲರ ಸ್ವಂತಕ್ಕಾಗಿ ನಾನು ನೇಮಿಸಿರುವ ಹತ್ತನೆಯ ಒಂದು ಭಾಗವನ್ನು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸಬೇಕು.