Versions
KNV ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
ERVKN ಹೆಷ್ಬೋನಿನಲ್ಲಿ ಬೆಂಕಿಯುಂಟಾಯಿತು. ಆ ಬೆಂಕಿ ಸೀಹೋನನ ಪಟ್ಟಣದಲ್ಲಿ ಉಂಟಾಯಿತು. ಆ ಬೆಂಕಿಯು ಮೋವಾಬಿನಲ್ಲಿರುವ ‘ಆರ್’ ಪಟ್ಟಣವನ್ನು ನಾಶಮಾಡಿತು. ಅದು ಅರ್ನೋನ್ ನದಿಯ ಬಳಿಯಲ್ಲಿರುವ ಬೆಟ್ಟಗಳನ್ನು ಸುಟ್ಟುಹಾಕಿತು.
IRVKN ಸೀಹೋನನ ಪಟ್ಟಣವಾದ ಹೆಷ್ಬೋನಿನಿಂದ ಅಗ್ನಿ ಜ್ವಾಲೆಹೊರಟು,
ಮೋವಾಬ್ಯರ ರಾಜಧಾನಿಯಾದ ಆರ್ ಎಂಬ ಪಟ್ಟಣವನ್ನೂ
ಅರ್ನೋನ್ ಬೆಟ್ಟದ ಮೇಲಿರುವ ಪ್ರಭುಗಳನ್ನು ದಹಿಸಿಬಿಟ್ಟಿತು.