Versions
KNV ಆದದರಿಂದ ಜನರು ಮೋಶೆಯ ಬಳಿಗೆ ಬಂದು --ನಾವು ಕರ್ತನಿಗೂ ನಿನಗೂ ವಿರೋಧವಾಗಿ ಮಾತನಾಡಿ ಪಾಪಮಾಡಿದ್ದೇವೆ; ಆತನು ನಮ್ಮಿಂದ ಸರ್ಪಗಳನ್ನು ದೂರ ಮಾಡುವ ಹಾಗೆ ಆತನಿಗೆ ಪ್ರಾರ್ಥನೆಮಾಡು ಅಂದರು. ಮೋಶೆಯು ಜನರಿ ಗೋಸ್ಕರ ಪ್ರಾರ್ಥನೆಮಾಡಿದನು.
ERVKN ಆಗ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಯೆಹೋವನಿಗೂ ವಿರೋಧವಾಗಿ ಮಾತಾಡಿ ಪಾಪ ಮಾಡಿದ್ದೇವೆ. ಈ ಸರ್ಪಗಳನ್ನು ನಮ್ಮಿಂದ ತೊಲಗಿ ಹೋಗುವಂತೆ ಪ್ರಾರ್ಥನೆ ಮಾಡು” ಎಂದು ಬೇಡಿಕೊಂಡರು. ಮೋಶೆ ಜನರಿಗೋಸ್ಕರ ಪ್ರಾರ್ಥಿಸಿದನು.
IRVKN ಆದುದರಿಂದ ಜನರು ಮೋಶೆಯ ಬಳಿಗೆ ಬಂದು, “ನಾವು ನಿನಗೂ ಮತ್ತು ಯೆಹೋವನಿಗೂ ವಿರುದ್ಧವಾಗಿ ಮಾತನಾಡಿ ದ್ರೋಹಿಗಳಾದೆವು. ಈ ಸರ್ಪಗಳು ನಮ್ಮ ಬಳಿಯಿಂದ ತೊಲಗಿಹೋಗುವಂತೆ ನೀನು ಯೆಹೋವನಿಗೆ ಪ್ರಾರ್ಥನೆಮಾಡಬೇಕು” ಎಂದು ಬೇಡಿಕೊಂಡರು.