Versions
KNV ಆಗ ಬಿಳಾಮನು ಕರ್ತನ ದೂತನಿಗೆ ಹೇಳಿದ್ದುನಾನು ಪಾಪಮಾಡಿದ್ದೇನೆ; ನೀನು ನನಗೆದುರಾಗಿ ಮಾರ್ಗದಲ್ಲಿ ನಿಂತಿದ್ದಿ ಎಂದು ನನಗೆ ತಿಳಿಯಲಿಲ್ಲ; ಹೀಗಿರಲಾಗಿ ಅದು ನಿನ್ನ ದೃಷ್ಟಿಯಲ್ಲಿ ಕೆಟ್ಟದ್ದಾದರೆ ನಾನು ತಿರುಗಿ ಹಿಂದಕ್ಕೆ ಹೋಗುತ್ತೇನೆ ಅಂದನು.
ERVKN ಆಗ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪ ಮಾಡಿದ್ದೇನೆ. ನೀನು ದಾರಿಯಲ್ಲಿ ನಿಂತುಕೊಂಡಿರುವುದು ನನಗೆ ಗೊತ್ತಾಗಲಿಲ್ಲ. ನನ್ನ ಪ್ರಯಾಣವು ನಿನಗೆ ಮೆಚ್ಚಿಕೆಯಾಗಿಲ್ಲದಿದ್ದರೆ, ನಾನು ಮನೆಗೆ ಹಿಂತಿರುಗುವೆನು” ಎಂದು ಹೇಳಿದನು.
IRVKN ಅದಕ್ಕೆ ಬಿಳಾಮನು ಯೆಹೋವನ ದೂತನಿಗೆ, “ನಾನು ಪಾಪಮಾಡಿದ್ದೇನೆ. ನೀನೇ ನನಗೆ ಎದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯಲಿಲ್ಲ. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ಹೋಗುತ್ತೇನೆ” ಎಂದನು.