Versions
KNV ಚೊಚ್ಚಲಾದವರೆಲ್ಲರೂ ನನ್ನವರೇ. ನಾನು ಐಗುಪ್ತ ದೇಶದಲ್ಲಿ ಚೊಚ್ಚಲಾದವುಗಳನ್ನೆಲ್ಲಾ ಹೊಡೆದ ದಿನ ದಲ್ಲಿ ನಾನು ಇಸ್ರಾಯೇಲಿನಲ್ಲಿ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದದ್ದನ್ನೆಲ್ಲಾ ಪರಿಶುದ್ಧ ಮಾಡಿಕೊಂಡಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಕರ್ತನು.
ERVKN “ನೀವು ಈಜಿಪ್ಟಿನಲ್ಲಿದ್ದಾಗ ನಾನು ಈಜಿಪ್ಟಿನವರ ಎಲ್ಲಾ ಚೊಚ್ಚಲು ಮಕ್ಕಳನ್ನು ಕೊಂದೆನು. ಆ ಕಾಲದಲ್ಲಿ ನಾನು ಇಸ್ರೇಲರ ಎಲ್ಲಾ ಚೊಚ್ಚಲು ಮಕ್ಕಳನ್ನು ನನ್ನವರನ್ನಾಗಿ ತೆಗೆದುಕೊಂಡೆನು. ಎಲ್ಲಾ ಚೊಚ್ಚಲು ಗಂಡುಮಕ್ಕಳು ಮತ್ತು ಚೊಚ್ಚಲು ಪಶುಗಳು ನನ್ನದಾಗಿದ್ದವು. ಆದರೆ ಈಗ ನಿಮ್ಮ ಎಲ್ಲಾ ಚೊಚ್ಚಲು ಗಂಡುಮಕ್ಕಳನ್ನು ನಿಮಗೇ ಹಿಂದಕ್ಕೆ ಕೊಡುತ್ತಿದ್ದೇನೆ ಮತ್ತು ಲೇವಿಯರನ್ನು ನನ್ನವರನ್ನಾಗಿ ಮಾಡುತ್ತಿದ್ದೇನೆ. ನಾನೇ ಯೆಹೋವನು”
IRVKN ಇಸ್ರಾಯೇಲರಲ್ಲಿ ಚೊಚ್ಚಲಾದವರು ನನ್ನ ಸೊತ್ತು. ಐಗುಪ್ತ ದೇಶದಲ್ಲಿದ್ದ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹಾರಮಾಡಿದಾಗ ಇಸ್ರಾಯೇಲರಲ್ಲಿರುವ ಚೊಚ್ಚಲಾದ ಮನುಷ್ಯರನ್ನೂ, ಪಶುಗಳನ್ನೂ ನನ್ನ ಸ್ವಂತವಾಗಿ ಪ್ರತಿಷ್ಠಿಸಿಕೊಂಡೆನು; ಅವರು ನನ್ನವರಾಗಿರಬೇಕು. ನಾನೇ ಯೆಹೋವನು” ಎಂದು ಹೇಳಿದನು. PS